Kodagu

ಭಾಗಮಂಡಲ: ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ಸನ್ಮಾನ

admincoorgdaily

ಮಡಿಕೇರಿ: ಭಾಗಮಂಡಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಭಾನುವಾರ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡು, ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು.

 ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಶಾಲೆಯ ಪ್ರಸ್ತುತ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು. ಕಾರ್ಯಕ್ರಮದ ಅಂಗವಾಗಿ 2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ಪ್ಲೇಟ್‌ಗಳನ್ನು ವಿತರಣೆ ಮಾಡಲಾಯಿತು. ಶಾಲೆಯ ಅಭಿವೃದ್ದಿಗೆ ವಿದ್ಯಾರ್ಥಿಗಳು ನೀಡಿದ ಸಹಕಾರವನ್ನು ಎಲ್ಲರೂ ಮೆಚ್ಚಿದರು. ಹಳೆಯ ವಿದ್ಯಾರ್ಥಿಗಳ ಪ್ರಾಮಾಣಿಕ ಪ್ರಯತ್ನದಿಂದ ಈ ಸನ್ಮಾನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.