ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ!

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ!
ಕೆ.ಎನ್ ರಾಜಣ್ಣ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ಅವರು ದಿಢೀರ್ ರಾಜೀನಾಮೆ ನೀಡಿವುದಾಗಿ ವರದಿಯಾಗಿದೆ. ಇಂದು(ಆ.11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.