ಬೈಕ್ ಅಪಘಾತ: ಪೊಲೀಸ್ ಸಿಬ್ಬಂದಿಯ ಕೈ ತುಂಡು, ಹೋಂ ಗಾರ್ಡ್ ಗೆ ಗಾಯ
admincoorgdaily

ಮಡಿಕೇರಿ, ಜೂನ್ 18: ಮಡಿಕೇರಿ-ಮಾಣಿ ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪರಿಣಾಮ ಸುಳ್ಯ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಸುಳ್ಯ ಠಾಣೆಯ ಪೊಲೀಸ್ ಸಿಬ್ಬಂದಿ ವಿಖ್ಯಾತ್ (28 )ಅವರಿಗೆ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದೆ. ಅವರ ಎಡಗೈ ತುಂಡರಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ. ಹೋಂ ಗಾರ್ಡ್ ಸಿಬ್ಬಂದಿ ಗಿರಿಧರ್ (48) ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿವೆ.
ಗಾಯಗೊಂಡ ಇಬ್ಬರನ್ನೂ ಕೂಡಲೇ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲುಗುಂಡಿ ಪೊಲೀಸ್ ಹೊರ ಠಾಣೆಯಲ್ಲಿ ಕರ್ತವ್ಯ ಮುಗಿಸಿ ಸಂಜೆ ವೇಳೆ ಸುಳ್ಯ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.