ಹುಟ್ಟುಹಬ್ಬ ಆಚರಣೆ; ವಿದ್ಯಾರ್ಥಿಗಳ ಜತೆ ಸಂಭ್ರಮಿಸಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ ಜು.10:-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ಜನ್ಮ ದಿನಾಚರಣೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕರು ಮೊದಲಿಗೆ ಭಾಗಮಂಡಲದ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ಭಾಗಮಂಡಲದ ಅಟಲ್ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಜೀವನದಲ್ಲಿ ಶಿಸ್ತು ಮತ್ತು ವಿದ್ಯಾಭ್ಯಾಸದ ಮಹತ್ವದ ಕುರಿತು ಸಲಹೆ ನೀಡಿದರು. ನಂತರ ಭಾಗಮಂಡಲ ಹಾಗೂ ಕುಂದಚೇರಿಯಲ್ಲಿ ನೂತನವಾಗಿ ನಿರ್ಮಾಣವಾದ ರಸ್ತೆಗಳನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.
ಗೋಣಿಕೊಪ್ಪಲುವಿನಲ್ಲಿ `ಕೊಳ್ಳಿಮಾಡ ಸಿ. ಕರುಂಬಯ್ಯ' ಅವರ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟಿಸಿದರು. ಪೆÇನ್ನಂಪೇಟೆಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪೆÇನ್ನಂಪೇಟೆಯ ಪ್ರಮುಖರು ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಗೋಣಿಕೊಪ್ಪಲುವಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಂದ್ಯಂಡ ಬೆಳ್ಳಿಯಪ್ಪ ಅವರ ಪುತ್ಥಳಿಯನ್ನು ಶಾಸಕರು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬಹಳ ದಿನಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದ ಗೋಣಿಕೊಪ್ಪ ಭಾಗದ ನೂರಾರು ನಿವಾಸಿಗಳಿಗೆ ಶಾಸಕರ ಹಸ್ತದಿಂದ ಹಕ್ಕು ಪತ್ರ ವಿತರಿಸಿದರು. ನಂತರ ವಿರಾಜಪೇಟೆಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರ ಜನ್ಮದಿನದ ಪ್ರಯುಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಶಾಸಕರು ಭಾಗವಹಿಸಿದರು.
ಬಳಿಕ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಾಶ್ರಮಕ್ಕೆ ತೆರಳಿದ ಶಾಸಕರು, ಅಲ್ಲಿನ ಹಿರಿಯ ಜೀವಗಳೊಂದಿಗೆ ಕೇಕ್ ಕತ್ತರಿಸಿ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ವೃದ್ಧಾಶ್ರಮದ ನಿವಾಸಿಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಶಾಸಕರು, ತಮ್ಮ ಸ್ವಂತ ವೆಚ್ಚದಲ್ಲಿ ಆಶ್ರಮಕ್ಕೆ ಫ್ಯಾನ್, ಟೇಬಲ್ ಹಾಗೂ ಟಿವಿಯನ್ನು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮಗಳಲ್ಲಿ ಶಾಸಕರ ಪತ್ನಿ ಕಾಂಚನ್ ಪೆÇನ್ನಣ್ಣ, ಪುತ್ರಿಯರು, ಶಾಸಕರ ಸಹೋದರ ನರೇನ್ ಕಾರ್ಯಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಮಿದೇರಿರ ನವೀನ್, ಪಟ್ಟಡ ರಂಜಿ ಪೂಣಚ್ಚ, ಸೌಕಾತ್ ಆಲಿ, ಪ್ರಮುಖರು ಹಾಗೂ ಅಭಿಮಾನಿಗಳು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
1

