ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಪತ್ತೆ

Apr 10, 2026 - 14:05
 0  2.3k
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಪತ್ತೆ

ಚಿಕ್ಕಮಗಳೂರು; ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಕೇರಳದಿಂದ ಬಂದಿದ್ದ ಬಾಲಕಿ ಏಪ್ರಿಲ್ 7 ರಂದು ಕಾಣೆಯಾಗಿದ್ದರು. ಎಸ್.ಡಿ.ಆರ್.ಎಫ್ ಮತ್ತು ಪೊಲೀಸ್ ತಂಡಗಳ ತೀವ್ರ ಶೋಧ ಕಾರ್ಯದ ನಂತರ ಏಪ್ರಿಲ್ 10 ರಂದು ಮೃತದೇಹ ಸಿಕ್ಕಿದೆ. ತನಿಖೆ ಮುಂದುವರಿದಿದೆ. 

ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ನಡೆಸಲಾಗಿತ್ತು . ಇದೀಗ ಹುಡುಗಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಸಹ ಬಳಸಲಾಗಿತ್ತು.

ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

What's Your Reaction?

Like Like 2
Dislike Dislike 1
Love Love 2
Funny Funny 0
Angry Angry 0
Sad Sad 10
Wow Wow 0