Kodagu

ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

admincoorgdaily

ಮಡಿಕೇರಿ ಕೋರ್ಟ್

ಮಡಿಕೇರಿ, ಜೂ. 22: ಮಡಿಕೇರಿ ನಗರದ ಹೊರವಲಯದಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ಮಧ್ಯಾಹ್ನ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ನ್ಯಾಯಾಲಯದ ಆವರಣವನ್ನು ತೆರವುಗೊಳಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಹೊರಗೆ ವಕೀಲರು ಹಾಗೂ ಸಿಬ್ಬಂದಿಗಳು ನಿಂತಿದ್ದಾರೆ. ಈ ವರ್ಷ ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಎರಡನೇ ಬೆದರಿಕೆ ಸಂದೇಶ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.