ಸೆ.07 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್, 07 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಸಿದ್ದಾಪುರ ಕೊಡಗು ಯೂನಿಯನ್ ಎಸ್‍ಎನ್‍ಡಿಪಿ ಅಧ್ಯಕ್ಷರಾದ ವಿ.ಕೆ.ಲೋಕೇಶ್, ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್ ಉಪ ಅಧೀಕ್ಷಕರಾದ ಬಿ.ಆರ್.ಲಿಂಗಪ್ಪ, ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಿ.ಎಸ್.ಲೀಲಾವತಿ, ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಇತರರು ಪಾಲ್ಗೊಳ್ಳಲಿದ್ದಾರೆ.