ಕೊಳಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ,ಪೋಷಣ ಅಭಿಯಾನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ಕೊಳಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ,ಪೋಷಣ ಅಭಿಯಾನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಕೊಳಕೇರಿ ಚೆಪ್ಪೆಂಡಡಿ ಶಾಲೆಯಲ್ಲಿ ಕೊಳಕೇರಿ ಹಾಗೂ ಕೋಟೇರಿ ಅಂಗನವಾಡಿ ಕೇಂದ್ರಗಳು ಜಂಟಿಯಾಗಿ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಸ್ತನ್ಯಪಾನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಕೆ. ಶೀಲಾ ಅವರು ಪಾಲ್ಗೊಂಡು ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ತೆಗೆದುಕೊಳ್ಳಬೇಕಾದ ಆಹಾರ ಪದ್ಧತಿ ಮತ್ತು ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಶಾನ್ನ ಮಕ್ಕಳ ತೂಕ ಎತ್ತರ, ತೋಳಿನಸುತ್ತಳತೆ, ಪರೀಕ್ಷಿಸಲಾಯಿತು. ಪ್ರತಿದಿನ ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳಿಗೆ ಬಹುಮಾನ ವಿತರಿಸಿ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ನಡೆದ ಬಳಿಕ ಅಂಗನವಾಡಿ ಕೇಂದ್ರ ವ್ಯಾಪ್ತಿಯಲ್ಲಿರುವ ಗರ್ಭಿಣಿ ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯೆ ಆಮಿನ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಲೋಚನ, ಬಾಲ ವಿಕಾಸ ಸಮಿತಿ ಸದಸ್ಯರು, ಕೊಳಕೇರಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿ ಬಾಣಂತಿಯರು, ಕಿಶೋರಿಯರು,ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.