ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಡಿಸಿ ಸಭೆ:ಶಾಸಕ ಎಎಸ್ ಪೊನ್ನಣ್ಣ ಭಾಗಿ

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಡಿಸಿ ಸಭೆ:ಶಾಸಕ ಎಎಸ್ ಪೊನ್ನಣ್ಣ ಭಾಗಿ

ವಿರಾಜಪೇಟೆ: ಸರಕಾರಿ ಪ್ರಥ‌ಮ ಕಾಲೇಜಿನಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ವಿರಾಜಪೇಟೆ ಸರಕಾರಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ಶಾಸಕರು, ಕಾಲೇಜಿನಲ್ಲಿ ನಡೆಯುತ್ತಿರುವ ಪ್ರಗತಿಯ ಬಗ್ಗೆ ವರದಿಗಳನ್ನು ಪರಿಶೀಲಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳೊಂದಿಗೆ ಚರ್ಚಿಸಿದ ಮಾನ್ಯ ಶಾಸಕರು ವಿದ್ಯಾರ್ಥಿಗಳ ಓದಿನ ದೃಷ್ಟಿಯಲ್ಲಿ ಹಾಗೂ ಇತರ ಚಟುವಟಿಕೆಗಳ ಕುರಿತು ಬೇಕಾದಂತಹ ಎಲ್ಲಾ ಸವಲತ್ತುಗಳ ಬಗ್ಗೆ ವಿವರಗಳನ್ನು ಪಡೆದು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಮಾದಂಡ ತಿಮಯ್ಯ, ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.