ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ಸಿಐಪಿಯು ಕಾಲೇಜಿಗೆ ತೃತೀಯ ಸ್ಥಾನ

Jul 30, 2026 - 19:26
 0  121
ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ಸಿಐಪಿಯು ಕಾಲೇಜಿಗೆ ತೃತೀಯ ಸ್ಥಾನ

ಪೊನ್ನಂಪೇಟೆ, ಜು.30: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪಿಯು ಕಾಲೇಜು (CIPU) ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಮೇಘನಾ ಸಿ.ಎಸ್., ತಾನ್ಯಾ ದೇಚಮ್ಮ ಕೆ.ಕೆ., ಅಂಕಿತ್ ಬಿದ್ದಪ್ಪ ಹಾಗೂ ಆಶಿಕ್ ಮಂದಣ್ಣ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ರೈಯಾನ್ ತಿಮ್ಮಯ್ಯ ಹಾಗೂ ಕಾವೇರಮ್ಮ ಸಿ.ಎಂ. ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಈ ಸಾಧನೆ ಮಾಡಿದ್ದಾರೆ.

 ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅಗತ್ಯವಾದ ತರಬೇತಿ ಹಾಗೂ ಮಾರ್ಗದರ್ಶನವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಕಾವ್ಯಶ್ರೀ ಹಾಗೂ ಹಿಂದಿ ಭಾಷಾ ಉಪನ್ಯಾಸಕಿ ಶ್ರೀಮತಿ ಉಷಾ ಎಂ.ಆರ್. ಅವರು ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0