ಆಗಸ್ಟ್ 16 ರಂದು ಸಿಎಂ ಡಿಕೆ ಶಿವಕುಮಾರ್ ಕೊಡಗಿಗೆ ಮೊದಲ ಭೇಟಿ
admincoorgdaily

ಮಡಿಕೇರಿ ; ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ರವರು ಆಗಸ್ಟ್ 16ರ ಶನಿವಾರ ಕೊಡಗು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಬೆಳಗ್ಗೆ 11:00 ಗಂಟೆಗೆ ಭಾಗಮಂಡಲದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ತಲಕಾವೇರಿಗೆ ತೆರಳಿ ಕಾವೇರಿ ಮಾತೆಯ ದರ್ಶನ ಪಡೆದು ಪೂಜೆ ನೆರವೇರಿಸಲಿದ್ದಾರೆ. ದೇವಾಲಯ ದರ್ಶನದ ಬಳಿಕ ಖಾಸಗಿ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾಹಿತಿ ನೀಡಿದ್ದಾರೆ.