ಸಚಿವ ಸಂಪುಟ ಪುನರ್ ರಚನೆ; ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಎಂ.ಇ ಅಶ್ರಫ್ ಒತ್ತಾಯ
admincoorgdaily

ಮಡಿಕೇರಿ: ರಾಜ್ಯದಲ್ಲಿ ಸದ್ಯದಲ್ಲೇ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಾಧ್ಯತೆ ಇದ್ದು,ಕೊಡಗಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ರಾಜ್ಯ ಕಾರ್ಯದರ್ಶಿ ಎಂ.ಇ ಅಶ್ರಫ್ ಸೋಮವಾರಪೇಟೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಶಕಗಳ ಬಳಿಕ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎಎಸ್ ಪೊನ್ನಣ್ಣ ಅವರು ಅಭಿವೃದ್ಧಿ ಕೆಲಸಗಳ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ಇಬ್ಬರು ಶಾಸಕದ್ವಯರು ಜನನಾಯಕರಾಗಿ ಜಿಲ್ಲೆಯನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಿದ್ದಲ್ಲಿ ಕೊಡಗು ಜಿಲ್ಲೆ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ. ಕಾಂಗ್ರೆಸ್ ಹೈಕಮಾಂಡ್ ಕೊಡಗಿನ ಶಾಸಕಾರದ ಡಾ.ಮಂತರ್ ಗೌಡ ಹಾಗೂ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಕೊಡಗು ಜಿಲ್ಲೆಯನ್ನು ಸಚಿವ ಸಂಪುಟ ಪುನರ್ ರಚನೆ ವೇಳೆ ಪರಿಗಣಿಸಬೇಕೆಂದು ಎಂ.ಇ ಅಶ್ರಫ್ ಅವರು ಒತ್ತಾಯಿಸಿದ್ದಾರೆ.