Kodagu

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಅರ್ಜಿ ಆಹ್ವಾನ

admincoorgdaily

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಅರ್ಜಿ ಆಹ್ವಾನ

ಮಡಿಕೇರಿ:-ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪೋಕ್ಸೋ ಪ್ರಕರಣಗಳಲ್ಲಿ ಬೆಂಬಲಿತ ವ್ಯಕ್ತಿಯಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಪೋಕ್ಸೋ ಪ್ರಕರಣಗಳಲ್ಲಿ ಬೆಂಬಲಿತ ವ್ಯಕ್ತಿಯಾಗಿ ಸೇವೆ ಸಲ್ಲಿಸಲು ಬೆಂಬಲಿತ ವ್ಯಕ್ತಿಗಳನ್ನು ನೇಮಕ ಮಾಡಲು ಗುರುತಿಸಲ್ಪಟ್ಟ ವ್ಯಕ್ತಿ/Pಐಗಿ ಅವರು ಸರ್ಕಾರಿ/ಖಾಸಗಿ ಕ್ಷೇತ್ರದ ಉದ್ಯೋಗಿ ಅಥವಾ ವಿದ್ಯಾರ್ಥಿಯಾಗಿರಬಾರದು, ಅವರು ಮಕ್ಕಳ ಸಂತ್ರಸ್ತ ಹಿತದೃಷ್ಟಿಯಿಂದ ಬೆಂಬಲಿತ ವ್ಯಕ್ತಿಯಾಗಿ ಕೆಲಸ ಮಾಡುವ ಮನಸ್ಥಿತಿಯನ್ನು ಹೊಂದಿರಬೇಕು. ಇದಲ್ಲದೆ, ಸಮಾಜ ಸೇವೆ ಅಥವಾ ಸಮಾಜಶಾಸ್ತ್ರ, ಮನೋವಿಜ್ಞಾನ, ಮಕ್ಕಳ ಅಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು ಅಥವಾ ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿ ವಿಷಯದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರುವ ಪದವೀಧರರಾಗಿರಬೇಕು.

ಅರ್ಜಿ ಸಲ್ಲಿಕೆಗೆ ಆಗಸ್ಟ್ 10 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 08272-222373 ಅಥವಾ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.