ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಉದಗಮಂಡಲಂ(ಊಟಿ) ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
admincoorgdaily

ತಮಿಳುನಾಡು;ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಎಐಸಿಸಿ ವೀಕ್ಷಕರಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ರವರೊಂದಿಗೆ ಇಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ ಬಿ ಸತೀಶ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ. ರಾಮಚಂದ್ರನ್ ರವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಉದಗಮಂಡಲಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ ರಾಮಚಂದ್ರನ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಖಜಾಂಚಿ ಚೇತನ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ಅಧ್ಯಕ್ಷರಾದ ಸೋಮೇಶ್, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ ಯು ಕಿರಣ್, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಚೇತನ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಮಾಜಿ ಸದಸ್ಯರಾದ ವಿನಿ, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದರ್ಶನ್, ಕೊಡಗು ಕಾಂಗ್ರೆಸ್ ಮುಖಂಡರಾದ ಯಶ್ ದೋಲ್ಪಾಡಿ ಉಪಸ್ಥಿತರಿದ್ದರು.