Kodagu

ಬಾಳೆಲೆ ಕೆನರಾ ಬ್ಯಾಂಕ್ ವತಿಯಿಂದ ನಿವೃತ್ತ ಯೋಧ ಮುಕ್ಕಾಟಿರ ಕಾವೇರಪ್ಪ ಅವರಿಗೆ ಸನ್ಮಾನ

admincoorgdaily

ಬಾಳೆಲೆ ಕೆನರಾ ಬ್ಯಾಂಕ್ ವತಿಯಿಂದ ನಿವೃತ್ತ ಯೋಧ ಮುಕ್ಕಾಟಿರ ಕಾವೇರಪ್ಪ ಅವರಿಗೆ ಸನ್ಮಾನ

ಪೊನ್ನಂಪೇಟೆ,ಆ 17: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದ ಯೋಧ ಮುಕ್ಕಾಟಿರ ಕಾವೇರಪ್ಪ ಅವರನ್ನು ಬಾಳೆಲೆ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ದೇಶದ ರಕ್ಷಣೆಯಲ್ಲಿ ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ, ಅವರ ದೇಶಭಕ್ತಿ, ತ್ಯಾಗ ಹಾಗೂ ಸೇವಾ ಮನೋಭಾವಕ್ಕೆ ಗೌರವ ಸೂಚಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಿವೃತ್ತ ಯೋಧರನ್ನು ಗೌರವಿಸುವ ಮೂಲಕ ಯುವಜನರಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರ ಸೇವೆಯ ಮನೋಭಾವ ಬೆಳೆಸುವ ಸಂದೇಶವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕಿ ಅಂಜು ಹಾಗೂ ಬ್ಯಾಂಕ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.