ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
ಕುಶಾಲನಗರ:ಕೂಡಿಗೆ-ಹಾಸನ ಹೆದ್ದಾರಿಯ ಕೂಡಿಗೆ ಮುಖ್ಯ ರಸ್ತೆಯಲ್ಲಿ ಕಳೆದ ಒಂದು ವಾರದ ಹಿಂದೆ ರಸ್ತೆ ದಾಟುವ ಸಂದರ್ಭ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಕೂಡಿಗೆ ಗ್ರಾಮದ ಜಯಮ್ಮ (65) ಎಂದು ಗುರುತಿಸಲಾಗಿದೆ. ಕಾರು ಡಿಕ್ಕಿಯಾದ ತಕ್ಷಣ ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
