ಕೆರೆಗೆ ಬಿದ್ದ ಕಾರು:ಮಹಿಳೆ ಸಾವು,ಈಜಿ ದಡ ಸೇರಿ ಜೀವ ಉಳಿಸಿಕೊಂಡ ಚಾಲಕ

ಕೆರೆಗೆ ಬಿದ್ದ ಕಾರು:ಮಹಿಳೆ ಸಾವು,ಈಜಿ ದಡ ಸೇರಿ ಜೀವ ಉಳಿಸಿಕೊಂಡ ಚಾಲಕ

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಶ್ವೇತಾ (29) ನೀರಿನಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ರವಿ, ಕಾರಿನ ಡೋರ್‌ ತೆರೆದು ಈಜಿ ದಡ ಸೇರಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.