Kodagu

ಮೋರಿಗೆ ಗುದ್ದಿ ಮಗುಚಿದ ಕಾರು

admincoorgdaily

ಮೋರಿಗೆ ಗುದ್ದಿ ಮಗುಚಿದ ಕಾರು

ಸುಂಟಿಕೊಪ್ಪ:ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದು ಮಗುಚಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಸ್ಪೈಸಸ್ ಅಂಗಡಿ ಬಳಿ ನಡೆದಿದೆ.

ಕಾರು ಕುಶಾಲನಗರ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.