ಗುಂಡಿಯನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಕಾರು
ಮಡಿಕೇರಿ:-ಗುಂಡಿಯನ್ನು ತಪ್ಪಿಸಲು ಹೋಗಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಕುಟುಂಬಸ್ಥರನ್ನು ಪತ್ರಕರ್ತರಿಬ್ಬರು ರಕ್ಷಣೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಇಂದು ನಡೆದಿದೆ.
ಮಡಿಕೇರಿ-ತಲಕಾವೇರಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದೆ. ಕಾರೊಂದು ಏಕಾಏಕಿ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅಲ್ಲದೇ ಕಾರು ಪಲ್ಟಿಯಾದ ಹಿನ್ನಲೆಯಲ್ಲಿ ಸ್ಥಳದಲ್ಲಿ ಇದ್ದ ಪತ್ರಕರ್ತರಾದ ಮಲ್ಲಿಕಾರ್ಜುನ್ ಹಾಗೂ ಶಿವು ಕಾರಿನಲ್ಲಿ ಇದ್ದ ಕುಟುಂಬಸ್ಥರನ್ನು ರಕ್ಷಣೆಗೆ ತೆರಳಿ ಕಾರಿನಲ್ಲಿ ಇದ್ದ ಮಕ್ಕಳು ವಯೋವೃದ್ದೆ ಹಾಗೂ ಕಾರಿನ ಚಾಲಕನನ್ನು ರಕ್ಷಣೆ ಮಾಡಲಾಯಿತು.
ನಂತರ ಗ್ರಾಮಸ್ಥರ ನೆರವಿನಿಂದ ಕಾರಿನಲ್ಲಿ ಇದ್ದ ಕುಟುಂಬಸ್ಥರನ್ನು ಮಡಿಕೇರಿಯ ಜಿಲ್ಲಾ ಅಸ್ಪತ್ರೆಗೆ ರವಾನೆ ಮಾಡಲಾಯಿತು. ಇನ್ನೂ ಬೆಳಿಗ್ಗೆ ಉಡುಪಿಯಿಂದ ನೇರವಾಗಿ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿರುವ ದರ್ಗಾ ಕ್ಕೆ ತೆರಳುವ ವೇಳೆಯಲ್ಲಿ ಈ ಘಟನೆ ಸಂಭವಿಸಿರುವುದರಿಂದ ಕಾರಿನಲ್ಲಿ ಇದ್ದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜು ಅಗಿದೆ.ಘಟನೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪತ್ರಕರ್ತರಿಬ್ಬರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.