ಪೆರುಂಬಾಡಿ ಬಳಿ ಕಾರು-ಟಿಪ್ಪರ್ ಡಿಕ್ಕಿ: ಶಬರಿಮಲೆ ಯಾತ್ರಾರ್ಥಿ ಸ್ಥಳದಲ್ಲೇ ಸಾವು
admincoorgdaily

ವಿರಾಜಪೇಟೆ: ಶಬರಿಮಲೆ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಭಕ್ತರ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪೆರುಂಬಾಡಿ ಚೆಕ್ ಪೋಸ್ಟ್‌ನಿಂದ ಸುಮಾರು 3 ಕಿ.ಮೀ ದೂರದಲ್ಲಿ ನಡೆದ ಈ ಅಪಘಾತದಲ್ಲಿ ಬೆಂಗಳೂರು ಡೈರಿ ಸರ್ಕಲ್ ನಿವಾಸಿ ಶಣ್ಮುಗ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿಫ್ಟ್ ಕಾರಿನಲ್ಲಿ ವಿರಾಜಪೇಟೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.