ನಾಪೋಕ್ಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅನೀಫ್ ಮೇಲೆ ನಡೆದ ಹಲ್ಲೆ ಪ್ರಕರಣ; ಆರು ಜನರ ವಿರುದ್ಧ ಪ್ರಕರಣ ದಾಖಲು
admincoorgdaily

ಮಡಿಕೇರಿ :ನಾಪೋಕ್ಲು ಬಳಿಯ ಚೆರಿಯಪರಂಬು ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಟಿ.ಎ.ಮೊಹಮ್ಮದ್ ಅನೀಫ್ ಎಂಬುವವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಹಲ್ಲೆ ನಡೆಸಿದ ಆರು ಜನರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
20-02-2026 ರಂದು ಹಲ್ಲೆ ನಡೆಸಿದ ಆರೋಪಿಗಳಾದ 1) ನಾಪೋಕ್ಲು ಬೇತು ಗ್ರಾಮದ ಕೆ.ಎ. ಇಸ್ಮಾಯಿಲ್,2)ಕೇಬಲ್ ಅಬ್ಬಾಸ್ 3)ಕೆ.ಯು.ಶಾಫಿ ಎಡಪಾಲ 4)ಹಳೇತಾಲೂಕಿನ ಟಿ.ಎ. ಮೊಹಮ್ಮದ್,5)ಟಿ.ಎ. ಇಬ್ರಾಹಿಂ, 6)ಕಟ್ಟೆ ನಾಸಿರ್, ಎಂಬುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತ BNS 2023(U/S 114,115(1),115(2),118,351,352,r/w(5) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.