Kodagu

ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ವಾಹನ ಹತ್ತಿಸಿದ ಆರೋಪ: ಕುಶಾಲನಗರದಲ್ಲಿ ಪ್ರಕರಣ ದಾಖಲು

admincoorgdaily

ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ವಾಹನ ಹತ್ತಿಸಿದ ಆರೋಪ: ಕುಶಾಲನಗರದಲ್ಲಿ ಪ್ರಕರಣ ದಾಖಲು

ಕುಶಾಲನಗರ, ಜೂ. 22: ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಜೀಪ್ ಚಾಲಕ ಉದ್ದೇಶಪೂರ್ವಕವಾಗಿ ವಾಹನ ಚಲಾಯಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

 ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಚಾಲಕ ಕ್ರೂರವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.