ಕಾವೇರಿ ತೀರ್ಥೋದ್ಭವ ಪೂರ್ವಭಾವಿ ಸಭೆ

ಕಾವೇರಿ ತೀರ್ಥೋದ್ಭವ ಪೂರ್ವಭಾವಿ ಸಭೆ

ಭಾಗಮಂಡಲ:ಅಕ್ಟೋಬರ್ 17ರಂದು ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ಜರುಗಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಜಾತ್ರೆಯ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ರವರೊಂದಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಭಾಗಮಂಡಲದಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಶಾಸಕರು, ಈಗಾಗಲೇ ರಾಜ್ಯ ಸರ್ಕಾರ ಈ ಭಾಗಕ್ಕೆ ಹೆಚ್ಚಿನ ಅನುದಾನ ಒದಗಿಸಿದ್ದು, ಕಳೆದ ಬಾರಿಗಿಂತಲೂ ಈ ಬಾರಿಯ ಕಾವೇರಿ ತೀರ್ಥೋದ್ಭವ ಉತ್ಸವವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗುವಂತೆಯೂ ಹಾಗೂ ಅದಕ್ಕೆ ಅವಶ್ಯಕತೆ ಇರುವ ಎಲ್ಲಾ ರೀತಿಯ ಪೂರ್ವಭಾವಿ ತಯಾರಿಗಳನ್ನು ಅಧಿಕಾರಿಗಳು ಚಾಚೂ ತಪ್ಪದೇ ಮಾಡಬೇಕೆಂದು ಸಲಹೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ರಾಜ್ಯದಿಂದ ಹಾಗೂ ಪರ ರಾಜ್ಯಗಳಿಂದ ಇಲ್ಲಿಗೆ ಭಕ್ತಾದಿಗಳು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ನೋಡಿಕೊಂಡು, ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಅಧಿಕಾರಿ ಶ್ರೀ ವೆಂಕಟ್ ರಾಜ್, ಅಪರ ಜಿಲ್ಲಾ ಅಧಿಕಾರಿ ಶ್ರೀಮತಿ ಐಶ್ವರ್ಯ, ಪೊಲೀಸ್ ವರಿಷ್ಠ ಅಧಿಕಾರಿ ಶ್ರೀ ರಾಮರಾಜನ್, ಜಿ ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ಶ್ರೀಧರ್, ಪಕ್ಷದ ಮುಖಂಡರು, ಹಿರಿಯ ಮುಖಂಡರು, ಸ್ಥಳೀಯ ಪ್ರಮುಖರು ಈ ಸಭೆಯಲ್ಲಿ ಉಪಸ್ಥಿತರಿದ್ದರು.