ನಾಳೆ ಕಾವೇರಿ ತೀರ್ಥೋದ್ಭವ: ಡಿಸಿಎಂ, ಡಿ.ಕೆ.ಶಿವಕುಮಾರ್ ಭಾಗಿ
ಮಡಿಕೇರಿ:ಅ.17ರಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕೊಡಗಿನ ಕುಲದೇವಿ ಮಾತೆ ಕಾವೇರಿ ಪವಿತ್ರ ತೀರ್ಥೋದ್ಭವ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಭಾಗಮಂಡಲ ಕಾವೇರಿ ಜೂ. ಕಾಲೇಜಿನ ಹೆಲಿಪ್ಯಾಡ್ ನಲ್ಲಿ ಮಧ್ಯಾಹ್ನ 12.30 ಗಂಟೆಗೆ ಆಗಮಿಸಲಿರುವ ಡಿಸಿಎಂ, ಡಿ.ಕೆ.ಶಿವಕುಮಾರ್ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ ಸೇರಿದಂತೆ ಇತರ ಗಣ್ಯರು ಭಾಗಿಯಾಗಲಿದ್ದಾರೆ.