ಕಾವೇರಿ ನದಿ ನೀರಿನ ಮಟ್ಟ ಏರಿಕೆ :ದುಬಾರೆಗೆ ನೋ ಎಂಟ್ರಿ!

ಕಾವೇರಿ ನದಿ ನೀರಿನ ಮಟ್ಟ ಏರಿಕೆ :ದುಬಾರೆಗೆ ನೋ ಎಂಟ್ರಿ!

ಕುಶಾಲನಗರ: ಸತತ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಹಿನ್ನಲೆಯಲ್ಲಿ ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯಲ್ಲಿ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.ಈ ಬಗ್ಗೆ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಿಂದ ಆದೇಶ ಹೊರಡಿಸಿದ್ದು, ಮುಂದಿನ ಆದೇಶ ವರೆಗೆ ನಿರ್ಬಂಧ ವಿಧಿಸಲಾಗಿದೆ.