ಕೇಂದ್ರ ಬಜೆಟ್ ವಿಕಸಿತ ಭಾರತಕ್ಕೆ ಭದ್ರ ಬುನಾದಿ; ಮಾಜಿ ಶಾಸಕ ಕೆ.ಜಿ.ಬೋಪಯ್ಯ

Feb 2, 2026 - 13:51
Feb 2, 2026 - 17:53
 0  238
ಕೇಂದ್ರ ಬಜೆಟ್ ವಿಕಸಿತ ಭಾರತಕ್ಕೆ ಭದ್ರ ಬುನಾದಿ; ಮಾಜಿ ಶಾಸಕ ಕೆ.ಜಿ.ಬೋಪಯ್ಯ

ಮಡಿಕೇರಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಎಂದು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೨೦೪೭ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ. ಬಡವರ ಪಾಲಿಗೆ ಗಗನ ಕುಸುಮವಾಗಿದ್ದ ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದೆ. ಮೀನುಗಾರಿಕೆಗೆ ಉತ್ತೇಜನ, ಶಿಕ್ಷಣ, ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಒಟ್ಟಿನಲ್ಲಿ ಸರ್ವ ಸ್ಪರ್ಶಿ ಸರ್ವ ವ್ಯಾಪ್ತಿ ಬಜೆಟ್ ಸರ್ವ ಮಂಡಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ತಮ್ಮ ೯ನೇ ಬಜೆಟ್ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದ್ದಾರೆ. ಏಳು ಹೈಸ್ಪೀಡ್ ರೈಲು ಕಾರಿಡಾರ್‌ಗಳು, ರಕ್ಷಣಾ ಕ್ಷೇತ್ರಕ್ಕೆ ಆದ್ಯತೆ, ಐಟಿ ಕಂಪನಿಗಳ ಮೂಲಕ ಯುವಕರಿಗೆ ಉದ್ಯೋಗಾವಕಾಶ ಸೇರಿದಂತೆ ವಿಕಸಿತ ಭಾರತದ ಕನಸಿಗೆ ಪೂರಕವಾಗಿವೆ ಎಂದರು. ಸುದ್ದಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರ.ಕಾ ಮಹೇಶ್ ಜೈನಿ, ಪ್ರಮುಖರಾದ ಸಜಿಲ್ ಕೃಷ್ಣ, ಅರುಣ್ ಕುಮಾರ್, ತಳೂರು ಕಿಶೋರ್ ಇದ್ದರು.

What's Your Reaction?

Like Like 1
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 1