ಚಾಮಿಯಾಲ:ನೂತನ ರಸ್ತೆ ಉದ್ಘಾಟನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಚಾಮಿಯಾಲ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ರಸ್ತೆಯ ಲೋಕಾರ್ಪಣೆಯನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಹಾಗೂ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ನೆರವೇರಿಸಿದರು.
ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಹಾಗೂ ಭೂಮಿ ಪೂಜೆ ಪ್ರಯುಕ್ತ ಪ್ರವಾಸ ಕೈಗೊಂಡ ಶಾಸಕರು ತಮ್ಮ ಅನುದಾನದ 10 ಲಕ್ಷದಲ್ಲಿ ನಿರ್ಮಾಣವಾದ ಈ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ,ವಲಯ ಅಧ್ಯಕ್ಷರಾದ ಕಾಲಮಂಡ ಬೇಬಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರಾದ ರಫೀಕ್, ಹನೀಫ್, ಮಾಜಿ ಪಂಚಾಯಿತಿ ಸದಸ್ಯರಾದ ಹನೀಫ್, ಕುಂದಚೀರ ಮಂಜು ದೇವಯ್ಯ, ಪಂಚಾಯಿತಿ ಸದಸ್ಯರಾದ ಅಶ್ಫಾಕ್, ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.