ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ

ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ

Jan 12, 2026 - 14:28
 0  218
ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ

ಮಡಿಕೇರಿ: ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15ರಂದು ಭಾಗಮಂಡಲದಲ್ಲಿ ಚಂಡಿಕಾ ಹೋಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮುದ್ದಂಡ.ಬಿ.ದೇವಯ್ಯ ತಿಳಿಸಿದ್ದಾರೆ.

ಕೊಡವ ಜನಾಂಗದ ಏಳಿಗೆ ಹಾಗೂ ಲೋಕಕಲ್ಯಾಣಕ್ಕಾಗಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ ಜಾಗದಲ್ಲಿ ಚಂಡಿಕಾ ಹೋಮ ನಡೆಯಲಿದೆ. ಅಂದು ಬೆಳಗ್ಗೆ ೭ ಗಂಟೆಯಿಂದ ಪೂಜಾ ಕೈಂಕರ್ಯ ಆರಂಭವಾಗಲಿದ್ದು, ಅಂದು ಗಣಪತಿ ಹೋಮ, ಸತ್ಯನಾರಾಯಣ ಸ್ವಾಮಿ ಪೂಜೆ, ಚಂಡಿಕಾ ಹೋಮ ಹಾಗೂ ಶಥರುದ್ರಾಭಿಷೇಕ ಪಠಣ ನಡೆಯಲಿದೆ.

ಅಂದಿನ ಧಾರ್ಮಿಕ ಪೂಜಾ ವಿಧಿವಿಧಾನಗಳಲ್ಲಿ ಕೊಡವ ಮತ್ತು ಅಮ್ಮಕೊಡವ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಟ್ರಸ್ಟಿಗಳಾದ ಪ್ರಭು, ಮನು ಮುದ್ದಪ್ಪ, ಸೋಮಯ್ಯ ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0