Kodagu

ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಚಾರಿಕ

admincoorgdaily

ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಚಾರಿಕ

ಗೋಣಿಕೊಪ್ಪ: ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕಳತ್ಮಾಡು ಲಯನ್ಸ್ ಶಾಲೆಯ ವಿದ್ಯಾರ್ಥಿ ಚಾರಿಕ ಎಂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಕಾರಂಜಿ ಮತ್ತು ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಿ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಯನ್ಸ್ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ಚಾರಿಕ ಅತ್ತೂರು ಗದ್ದೆಮನೆ ನಿವಾಸಿ ಮದು ಮತ್ತು ವಿಶಾಲಕ್ಷಿ ದಂಪತಿಗಳ ಪುತ್ರಿ.