ಚೇನಂಡ ಕೊಡವ ಕೌಟುಂಬಿಕ ಹಾಕಿ ಉತ್ಸವ: ಪ್ರತಿಯೊಂದು ಗೋಲಿಗೂ ಒಂದು ಗಿಡ ನೆಡುವು ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ:,ತಾಲೂಕಿನನಾಪೋಕ್ಲು ಕೊಕೇರಿಯಲ್ಲಿ ರಸ್ತೆ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಚಾಲನೆ ನೀಡಿದರು. ಬಳಿಕ ಸ್ಥಳೀಯ ಚೇನಂಡ ಕುಟುಂಬದವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕರು ವಿಶೇಷ ಅತಿಥಿಯಾಗಿ ಭಾಗವಹಿಸಿದರು. ಪ್ಲಾಂಟೇಶನ್ ಡ್ರೈವ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶಾಸಕರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಂಬರುವ ಚೇನಂಡ ಕಪ್ ಹಾಕಿ ಪಂದ್ಯಾವಳಿಯ ಪ್ರತಿಯೊಂದು ಗೋಲಿಗೂ ಒಂದು ಗಿಡ ನೆಡುವುದಾಗಿ ಕಾರ್ಯಕ್ರಮದ ಆಯೋಜಕರು ಶಾಸಕರೊಂದಿಗೆ ಮಾಹಿತಿ ಹಂಚಿಕೊಂಡರು. ಈ ಭಾಗದ ಪೊನ್ನಚಂಡ ರಸ್ತೆ ಹಾಗೂ ಚೇನಂಡ ರಸ್ತೆಯ ಭೂಮಿ ಪೂಜೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕೌಶಿ ಕಾವೇರಪ್ಪ, ವಲಯ ಅಧ್ಯಕ್ಷರು ವಿನೋದ್ ನಾಣಯ್ಯ, ಪ್ರಕಾಶ್, ಸಂಪನ್ ಅಯ್ಯಪ್ಪ, ಚೇನಂಡ ಕುಟುಂಬಸ್ಥರು ಹಾಗೂ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
