ಚೇನಂಡ ಕೊಡವ ಹಾಕಿ ಉತ್ಸವ: ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಒಂದು‌ ಕೋಟಿ‌ ಅನುದಾನ

Nov 2, 2025 - 14:13
 0  489
ಚೇನಂಡ ಕೊಡವ ಹಾಕಿ ಉತ್ಸವ: ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ಸರ್ಕಾರದಿಂದ ಒಂದು‌ ಕೋಟಿ‌ ಅನುದಾನ

ಬೆಂಗಳೂರು:ಇಂದು ಗೃಹ ಕಚೇರಿಯಲ್ಲಿ "ಚೇನಂಡ ಕೊಡವ ಹಾಕಿ ಉತ್ಸವದ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ,ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು. 

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ. 

2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದರು.

ಶಾಸಕರು, ನನ್ನ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಎನ್.ಎಸ್. ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಅನೇಕ ಮುಖಂಡರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 1