ಚೆನ್ನಯ್ಯನಕೋಟೆ:ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಶ್ರೀ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು, ತಾನು ಪ್ರತಿವರ್ಷ ಈ ಗಣೇಶೋತ್ಸವ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುತ್ತಿದ್ದು, ಇಂಡಿಯಾ ನಿವಾಸಿಗಳು ಗಣೇಶೋತ್ಸವವನ್ನು ಅದ್ಧೂರಿಯಾಗಿ ಮಾಡುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.
ಆ ಭಗವಂತನು ನಾಡಿಗೆ ಹಾಗೂ ಸಮಸ್ತ ಜನತೆಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಪ್ರಮುಖರು ,ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.