ಚೆಟ್ಟಳ್ಳಿ: ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ

May 30, 2026 - 20:13
 0  1.1k
ಚೆಟ್ಟಳ್ಳಿ: ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ
Photo credit: istock photo

ಚೆಟ್ಟಳ್ಳಿ:ಸಮೀಪದ ಚೇರಳ ಶ್ರೀಮಂಗಲ ಗ್ರಾಮದಲ್ಲಿ ವಿಜಯಲಕ್ಷಿ (86) ಎಂಬ ವೃದ್ಧೆಯ ಮೃತದೇಹ ಕಿರಿದಾದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮಾಹಿತಿ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪೊಲೀಸರ ತನಿಖೆಯಿಂದ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಾದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 4
Wow Wow 0