ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕ ಕಂದಸ್ವಾಮಿ ಹೃದಯಾಘಾತದಿಂದ ನಿಧನ
ಚೆಟ್ಟಳ್ಳಿ: ಕಳೆದ ಹಲವು ವರ್ಷಗಳಿಂದ ಚೆಟ್ಟಳ್ಳಿ ಗ್ರಾಮ ಪಂಚಾಯತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ಚೆಟ್ಟಳ್ಳಿ ಗ್ರಾಮದ ಕಂದಸ್ವಾಮಿ ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಂದ ಸ್ವಾಮಿ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಏಕೈಕ ಪೌರಕಾರ್ಮಿಕರಾಗಿದ್ದರು. ಮತರು ಪತ್ನಿ ಮೂವರು ಮಕ್ಕಳು ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಕಂದಸ್ವಾಮಿ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.