ಚೆಯ್ಯಂಡಾಣೆ:ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದಾರ್ಥ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ:ಇತ್ತೀಚಿಗೆ ನಿಧನರಾದ ನರಿಯಂದಡ ಗ್ರಾಮ ಪಂಚಾಯಿತಿಯ ಚೆಯ್ಯಂಡಾಣೆ ಭಾಗದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪೊಕುಲ್ರಂಡ ಸಿದ್ದಾರ್ಥ ರವರ ಮನೆಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮನೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಪಂಚಾಯಿತಿ ಸದಸ್ಯರು ಸುಬೈರ್, ಮಮ್ಮದ್, ಪಕ್ಷದ ಪ್ರಮುಖರು ಶೈಲಾ ಕುಟ್ಟಪ್ಪ, ಪ್ರಕಾಶ್ ಉಪಸ್ಥಿತರಿದ್ದರು.
