ಚೆಯ್ಯಂಡಾಣೆ:ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ | ಕ್ರೀಡಾ ಕ್ಷೇತ್ರಸಲ್ಲಿ ಮಹಿಳೆಯರ ಸಾಧನೆ ಶ್ಲಾಘನೀಯ:ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಚೆಯ್ಯಂಡಾಣೆಯ, "ನೀಲಿಯತ್ ಲೇಡೀಸ್ ಕ್ಲಬ್, ಕೊಕೇರಿ" ಇವರು ಆಯೋಜಿಸಿದ ಮಹಿಳಾ ಕ್ರಿಕೆಟ್ ಪಂದ್ಯಾಟದ ಉದ್ಘಾಟಕರಾಗಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಚೈಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಉದ್ಘಾಟನೆ ನೆರವೇರಿಸಿ ಶುಭ ಕೋರುತ್ತಾ ಮಾತನಾಡಿದ ಶಾಸಕರು, ಸಮಾಜದ ಎಲ್ಲಾ ಚಟುವಟಿಕೆಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿರುವುದು ಸಮಾಜದ ಏಳಿಗೆಗೆ ಉತ್ತಮವಾದ ಬೆಳವಣಿಗೆ.
ಹಾಗೆಯೇ ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಕ್ರೀಡೆಗಳಲ್ಲಿ ಮಹಿಳೆಯರ ಸಾಧನೆ ಅತ್ಯಂತ ಶ್ಲಾಘನೀಯವಾಗಿ ಮೂಡಿ ಬರುತ್ತಿದೆ. ವಿಶೇಷವಾಗಿ ಕ್ರೀಡೆಗೆ ಹೆಸರುವಾಸಿಯಾಗಿರುವ ನಮ್ಮ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಹಿಳೆಯರು/ಯುವತಿಯರು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವುದು ನಾಡಿಗೆ ಮಾತ್ರ ಅಲ್ಲ ದೇಶಕ್ಕೆ ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು.
ಇಂದಿನ ಈ ಮಹಿಳಾ ಕ್ರಿಕೆಟ್ ಪಂದ್ಯಾಟ ಇಂತಹದೇ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೆಮ್ಮಂಡ ನಂದ ನಾಣಯ್ಯ, ಪಂಚಾಯಿತಿ ಅಧ್ಯಕ್ಷರು ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಸದಸ್ಯರು ಸುಬೈರ್, ಮಮ್ಮದ್, ಶೈಲಾ ಕುಟ್ಟಪ್ಪ, ಪ್ರಕಾಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
