ಮುಖ್ಯಮಂತ್ರಿಯಾದ ಬಳಿಕ ಕೊಡಗಿಗೆ ಮೊದಲ ಬಾರಿ ಭೇಟಿ ನೀಡಿದ ಮುಖ್ಯಮಂತ್ರಿ ‌ಡಿ.ಕೆ‌ ಶಿವಕುಮಾರ್

Aug 16, 2026 - 12:43
 0  267
ಮುಖ್ಯಮಂತ್ರಿಯಾದ ಬಳಿಕ ಕೊಡಗಿಗೆ ಮೊದಲ ಬಾರಿ ಭೇಟಿ ನೀಡಿದ ಮುಖ್ಯಮಂತ್ರಿ ‌ಡಿ.ಕೆ‌ ಶಿವಕುಮಾರ್

ಭಾಗಮಂಡಲ:ಮುಖ್ಯಮಂತ್ರಿಯಾದ ಬಳಿಕ ಕೊಡಗು ಜಿಲ್ಲೆಗೆ ಇದೇ ಮೊದಲ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಮಳೆ ನಡುವೆಯೂ ಅದ್ಧೂರಿ ಸ್ವಾಗತ ದೊರೆಯಿತು.

ಹೆಲಿಕಾಪ್ಟರ್ ಮೂಲಕ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ, ಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಸೋಮಶೇಖರ್, ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಅರುಣ್ ಮಾಚಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. 

ಬಳಿಕ ಅವರು ಭಗಂಡೇಶ್ವರ ದೇವಾಲಯಕ್ಕೆ ತೆರಳಿ ಭಗಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ತೆರಳಲಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್ನಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಡಿ.ಕೆ. ಶಿವಕುಮಾರ್ ಅವರ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಳೆಯ ಸಿಂಚನದ ನಡುವೆಯೂ ಶಾಸಕ ಡಾ. ಮಂತರ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಡೆ ಸ್ವಾಗತಕ್ಕೆ ಸಿದ್ಧವಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0