Kodagu

ನಾಳೆ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

admincoorgdaily

ನಾಳೆ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಮಡಿಕೇರಿ:-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಸ್ಟ್ 16 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಆಗಸ್ಟ್ 16 ರಂದು ಬೆಳಗ್ಗೆ 11.45 ಗಂಟೆಗೆ ಭಾಗಮಂಡಲದ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12.45 ಗಂಟೆಗೆ ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮದ ವಿರಾಜಪೇಟೆ ಮುಖ್ಯ ರಸ್ತೆಯಲ್ಲಿರುವ ಕೂರ್ಗ್ ವೈಲ್ಡರ್ನೆಸ್ ರೆಸಾರ್ಟ್‍ಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.