ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ: ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ  ವರ್ಗಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ: ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕಗಳ ಜಿಲ್ಲಾಧ್ಯಕ್ಷರಾದ ಬಾನಂಡ ಪ್ರತ್ಯು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದರು.

ಮುಂದಿನ ತಿಂಗಳು ವಿರಾಜಪೇಟೆ ಕ್ಷೇತ್ರದ ಹಿಂದುಳಿದ ವರ್ಗಗಳ ಘಟಕದ ಬೃಹತ್ ಸಮಾವೇಶ ಆಯೋಜಿಸುವ ಬಗ್ಗೆ ಚರ್ಚಿಸಿದ ಶಾಸಕರು, ಈ ಸಮಾವೇಶಕ್ಕೆ ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರನ್ನು ಆಹ್ವಾನಿಸುವುದಾಗಿ ತಿಳಿಸಿದರು. ಈ ಸಮಾವೇಶದ ಪೂರ್ವಭಾವಿ ತಯಾರಿಯ ಬಗ್ಗೆ ಮಾಹಿತಿ ನೀಡಿದ ಮಾನ್ಯ ಶಾಸಕರು, ಸಮಾವೇಶದ ಯಶಸ್ವಿಗೆ ಕೈಗೊಳ್ಳಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ಬಗ್ಗೆ ಪದಾಧಿಕಾರಿಗಳಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಪಕ್ಷದ ಪ್ರಮುಖರು ಮಾಜಿ ಅಧ್ಯಕ್ಷರು ಸಾರ ಚಂಗಪ್ಪ, ಕಾವೇರಪ್ಪ, ಸತೀಶ್, ಮುಕಟೀರ ಸಂದೀಪ್, ಮತೀನ್, ಶಾಜಿ ಅಚ್ಚುತನ್, ಪೃಥ್ವಿನಾಥ್, ನಾಯಂದಿರ ಶಿವಾಜಿ, ಬಾಲಕೃಷ್ಣ, ಪಿ ಜಿ ಅಯ್ಯಪ್ಪ, ಶರತ್, ಶಶಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.