ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕದ್ವಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
ಬೆಂಗಳೂರು:ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಅವರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.