ಕೊಡಗು ಮೂಲದ ಪೊಲೀಸ್ ಅಧಿಕಾರಿ ಕಿಶೋರ್ ರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Mar 29, 2026 - 01:31
 0  417
ಕೊಡಗು ಮೂಲದ ಪೊಲೀಸ್ ಅಧಿಕಾರಿ ಕಿಶೋರ್ ರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ
ಕಿಶೋರ್

ಬೆಂಗಳೂರು;ನಗರದ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಅವರು 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಬಿ.ಟಿ ಕಿಶೋರ್ ರವರು ಈ ಹಿಂದೆ ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣೆ, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರಲ್ಲದೆ ಪ್ರಸ್ತುತ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ಕೊಲೆ, ಕಳ್ಳತನ, ದರೋಡೆ ಹಾಗೂ ಸುಲಿಗೆ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಮಾಲು ಸಮೇತ ಪತ್ತೆ ಹಚ್ಚಿರುತ್ತಾರೆ.

ಅದರಲ್ಲೂ ಇತ್ತೀಚಿಗೆ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಬೆಂಗಳೂರು ನಗರದ ಹೃದಯಭಾಗದಲ್ಲಿ ಹಾಡ ಹಗಲೇ ATM 7 ಕೋಟಿ 11 ಲಕ್ಷ ರೂ. ದರೋಡೆ ಪ್ರಕರಣ ನಡೆದ ಮೂರೇ ದಿನದಲ್ಲಿ ಆರೋಪಿಗಳನ್ನು ಹೈದರಾಬಾದ್ ನಗರದಲ್ಲಿ ಹಣ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ಇವರ ಕಾರ್ಯಕ್ಷಮತೆ, ದಕ್ಷತೆ ಹಾಗೂ ಪ್ರಾಮಾಣಿಕ ಸೇವೆಗಾಗಿ ಕಿರಿಯ ವಯಸ್ಸಿನಲ್ಲಿಯೇ ಮುಖ್ಯ ಮಂತ್ರಿಗಳ ಚಿನ್ನದ ಪದಕ ಮುಡಿಗೇರುವಂತೆ ಮಾಡಿದೆ. ಏಪ್ರಿಲ್ 2 ರಂದು ಬೆಂಗಳೂರು ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಿಶೋರ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0