ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ; ಕೊಡಗು ಜಿಲ್ಲೆಯ ನಿಯಂತ್ರಣ ಕೊಠಡಿಯ ಎ. ಎಸ್ ಐ.ಜೋಷಿ ಕುಟ್ಟಪ್ಪ ಅವರಿಗೆ ಚಿನ್ನದ ಪದಕ
ಮಡಿಕೇರಿ;ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಅವರಿಗೆ 2025ನೇ ಸಾಲಿಗೆ ಮುಖ್ಯ ಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ನಡೆಯುವ ಪದಕ ಪ್ರದಾನ ಸಮಾರಂಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರು ಮುಖ್ಯ ಮಂತ್ರಿ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ನಿಯಂತ್ರಣ ಕೊಠಡಿಯ ASI ಜೋಷಿ ಕುಟ್ಟಪ್ಪ;
ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ನಿಸ್ತಂತು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ) ಮಡಿಕೇರಿಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜೋಷಿ ಕುಟ್ಟಪ್ಪ ಅವರು 20225 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
