ಚಿಕ್ಕಮಗಳೂರು; ಭದ್ರ ನದಿಯಲ್ಲಿ ಈಜಲು ತೆರಳಿದ್ದ ಕೊಡಗಿನ ಇಬ್ಬರು ಯುವಕರು ನೀರುಪಾಲು

Feb 15, 2026 - 10:23
Feb 15, 2026 - 10:35
 0  2k
ಚಿಕ್ಕಮಗಳೂರು; ಭದ್ರ ನದಿಯಲ್ಲಿ ಈಜಲು ತೆರಳಿದ್ದ ಕೊಡಗಿನ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳಿ ಸಮೀಪ ನಡೆದಿದೆ. ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ದೈವಿಗಳು. ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು ಎನ್ನಲಾಗುತ್ತಿದೆ,ಆದರೆ ಇದರ ಬಗ್ಗೆ ಖಚಿತ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ.

 ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಗೆ ಬಂದಿದ್ದ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿಯ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶನಿವಾರ ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಲಿರುವ ಪೊಲೀಸರು ಭಾನುವಾರ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 7
Wow Wow 0