ಪುಟಾಣಿ ನಗರದಲ್ಲಿ ಬಾಲ ವಿಕಾಸ ಸಭೆ
ಮಡಿಕೇರಿ ಆ.12:-ಪುಟಾಣಿ ನಗರದ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ವತಿಯಿಂದ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಅರಿವು ಕಾರ್ಯಕ್ರಮ ಹಾಗೂ ಬಾಲ ವಿಕಾಸಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಅಂಗನವಾಡಿ ಕೇಂದ್ರಗಳು ನಿಯಮಾನುಸಾರ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದರ ಜೊತೆಗೆ ಸಮುದಾಯದ ಸಹಕಾರ ಪಡೆದು ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿ ರೂಪಿಸುವಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಬಳಿಕ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸರಿಯಾದ ರೀತಿಯಲ್ಲಿ ಕೈ ತೊಳೆಯುವ ವಿಧಾನಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ, ನಿವೃತ್ತ ಉಪಾಧ್ಯಾಯರಾದ ಪೆÇನ್ನಮ್ಮ, ಬಾಲ ವಿಕಾಸ ಸಮಿತಿ ಸದಸ್ಯರಾದ ರಮೇಶ್, ಚಾರ್ಲಿ, ಬಡೇಸಾಬ್, ಲತಾ, ಅಂಗನವಾಡಿ ಕಾರ್ಯಕರ್ತೆ ಉಮಾ, ಸಹಾಯಕಿ ದೈವಾಣಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
