ಮನೆಯ ಸಂಪ್ ಗೆ ಬಿದ್ದು ಮಗು ಸಾವು; ಮಗುವಿನ ದೇಹವನ್ನು ಉಪ್ಪಿನಲ್ಲಿ ಇಟ್ಟು ಮಾಡಿದ್ದೇನು ಗೊತ್ತೇ!

Jun 8, 2026 - 23:47
 0  3k
ಮನೆಯ ಸಂಪ್ ಗೆ ಬಿದ್ದು ಮಗು ಸಾವು; ಮಗುವಿನ ದೇಹವನ್ನು ಉಪ್ಪಿನಲ್ಲಿ ಇಟ್ಟು ಮಾಡಿದ್ದೇನು ಗೊತ್ತೇ!

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ.

ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ. ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ, ಪೋಷಕರು ಆಕೆಯ ದೇಹವನ್ನು ಗಂಟೆಗಟ್ಟಲೆ ಉಪ್ಪಿನಲ್ಲಿ ಮುಳುಗಿಸಿಟ್ಟಿದ್ದಾರೆ. ಆದರೂ ಮಗು ಮಾತ್ರ ಬದುಕಲಿಲ್ಲ. ಕೊನೆಗೆ ವೈದ್ಯರ ಸೂಚನೆ ಮೇರೆಗೆ ಮಗುವಿನ ಮೃತ ದೇಹವನ್ನು ಹೊರತೆಗೆಲಾಯ್ತು.

ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಮಗು ನೀರಿನಲ್ಲಿ ಮುಳುಗಿದ್ದನ್ನು ತಡವಾಗಿ ಗಮನಿಸಲಾಗಿದ್ದು, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಪ್ಪಿನಲ್ಲಿಟ್ಟರೇ ಮಗು ಬದುಕುತ್ತೆ ಎಂಬ ನಂಬಿಕೆ

ಮಗು ಮೃತಪಟ್ಟಿದ್ದರೂ ಅದನ್ನು ಒಪ್ಪಿಕೊಳ್ಳದ ಕುಟುಂಬಸ್ಥರು, ಮಗುವನ್ನು ಹೇಗಾದರೂ ಮಾಡಿ ಬದುಕಿಸಲೇಬೇಕು ಎಂದು ಮುಂದಾಗಿದ್ದಾರೆ. ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟರೆ ಮತ್ತೆ ಜೀವ ಬರುತ್ತದೆ ಎಂಬ ಬಲವಾದ ನಂಬಿಕೆ ಅವರದ್ದಾಗಿತ್ತು. ಹೀಗಾಗಿ, ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದಾರೆ.

 ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯ ಬಳಿಯೇ ಮಗುವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದ ಪೋಷಕರು, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪ್ರಾರ್ಥನೆಯನ್ನು ಹಾಕಿ ಬದುಕಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಸರಿಸುಮಾರು ಎರಡು ತಾಸಿಗೂ ಅಧಿಕ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲೇ ಇಟ್ಟಿದ್ದರು. ಆದರೆ ಯಾವುದೇ ಪವಾಡಗಳು ನಡೆಯದಿದ್ದಾಗ ಮತ್ತು ಮಗುವಿನಲ್ಲಿ ಯಾವುದೇ ಚಲನೆ ಕಾಣಿಸದಿದ್ದಾಗ ಪೋಷಕರು ನಿರಾಶೆಗೊಂಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಶವ ಹೊರಕ್ಕೆ

ಎರಡು ಗಂಟೆಗಳ ನಂತರ ಸ್ಥಳದಲ್ಲಿದ್ದ ವೈದ್ಯರು ಪೋಷಕರಿಗೆ ತಿಳಿಹೇಳಿ, ವೈದ್ಯಕೀಯ ಸಲಹೆಗಳನ್ನು ನೀಡಿದ್ದಾರೆ. ವೈದ್ಯರ ಮಾತನ್ನು ಕೇಳಿದ ಕುಟುಂಬಸ್ಥರು ಕೊನೆಗೂ ಮಗುವಿನ ದೇಹವನ್ನು ಉಪ್ಪಿನಿಂದ ಹೊರಗೆ ತೆಗೆದಿದ್ದಾರೆ. ಬಳಿಕ ಮಗುವಿನ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯ್ತು. ನಂತರ ಪೋಷಕರು ಮೃತದೇಹವನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ.

ಇದರೊಂದಿಗೆ ಸಾರ್ವಜನಿಕರಲ್ಲಿ ಮನವಿ ಏನೆಂದರೆ ಅರೇಬರೇ ಜೀವ ಇದ್ದಾಗಲು ಇಂತಹ ಮೂಢನಂಬಿಕೆಗಳನ್ನು ನಂಬಿಕೊಂಡು ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು. ಜೀವ ಉಳಿಸಲು ವೈದ್ಯಕೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಬೇಕು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 1
Sad Sad 10
Wow Wow 0