ನಾಳೆಯಿಂದ ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್–1 ಆರಂಭ
ಸಿದ್ದಾಪುರ: ಸಿಜೆ ಬಿಲ್ಡ್‌ವೇರ್ ಪ್ರಸ್ತುತಿಯಲ್ಲಿ ಐಪಿಎಲ್ ಮಾದರಿಯಲ್ಲಿ ಆಯೋಜಿಸಲಾಗುತ್ತಿರುವ ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಆವೃತ್ತಿ–1ರ ಕ್ರಿಕೆಟ್ ಕ್ರೀಡಾಕೂಟ ನಾಳೆಯಿಂದ ಆರಂಭಗೊಳ್ಳಲಿದೆ.
ಸಿದ್ದಾಪುರದ ಪ್ರೌಢಶಾಲಾ ಮೈದಾನದಲ್ಲಿ ಏಪ್ರಿಲ್ 10, 11 ಮತ್ತು 12ರಂದು ಪಂದ್ಯಾವಳಿಗಳು ನಡೆಯಲಿದ್ದು, ಕೊಡಗಿನ ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಯುವಕರಿಗೆ ಕ್ರೀಡಾ ವೇದಿಕೆ ಒದಗಿಸುವ ಉದ್ದೇಶದಿಂದ ಈ ಲೀಗ್ ಆಯೋಜಿಸಲಾಗಿದೆ.
ಈ ಕ್ರೀಡಾಕೂಟದಲ್ಲಿ ಒಟ್ಟು 12 ತಂಡಗಳು ಭಾಗವಹಿಸುತ್ತಿದ್ದು, ಐಪಿಎಲ್ ಶೈಲಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ಈಗಾಗಲೇ ಯಶಸ್ವಿಯಾಗಿ ನಡೆದಿದ್ದು, ಪಂದ್ಯಾವಳಿಯ ಬಗ್ಗೆ ಯುವಕರಲ್ಲಿ ಭಾರೀ ಉತ್ಸಾಹ ವ್ಯಕ್ತವಾಗಿದೆ. ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸುವ ಜೊತೆಗೆ ಯುವಕರಲ್ಲಿ ಐಕ್ಯತೆ ಮತ್ತು ಸೌಹಾರ್ದತೆಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಲೀಗ್ ಪ್ರಮುಖ ಪಾತ್ರವಹಿಸಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸ್ಥಳೀಯ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.