ಮಾರ್ಚ್ 16 ರಂದು ರಾಜಾ ಸೀಟ್‌ನಲ್ಲಿ “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ
ಮಡಿಕೇರಿ;ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆ ಪಾಲುದಾರರು ಇವರ ಸಹಕಾರದಲ್ಲಿ ಮಾರ್ಚ್ 16 ರಂದು ಬೆಳಗ್ಗೆ 8 ಗಂಟೆಗೆ ರಾಜಾ ಸೀಟ್‌ನಲ್ಲಿ “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿಯವರು, ಜಿಲ್ಲಾ ಪಂಚಾಯತ್ ಸಿಇಒ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಉಪ ವಿಭಾಗಾಧಿಕಾರಿಯವರು ಇತರರು ಪಾಲ್ಗೊಳ್ಳಲಿದ್ದಾರೆ. ಹೋಂಸ್ಟೇ, ಹೋಟೆಲ್, ರೆಸಾರ್ಟ್, ಟ್ಯಾಕ್ಸಿ ಮತ್ತು ಜೀಪ್ ಮಾಲೀಕರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.