ಸ್ವಚ್ಛ ಕೊಡಗು- ಸುಂದರ ಕೊಡಗು: ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಸ್ವಚ್ಛ ಕೊಡಗು- ಸುಂದರ ಕೊಡಗು:  ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಮಡಿಕೇರಿ:ಮೂರ್ನಾಡು ಬಸ್ ನಿಲ್ದಾಣದಿಂದ ಕುಂಬಳದಾಳು ಕೊಡವ ಸಮಾಜ ಮಾರ್ಗವಾಗಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಸ್ಕೌಟ್ ಶಿಕ್ಷಕಿ ಶ್ರೀಮತಿ ಸುನಿತಾ ಎಂ , ಗೈ ಡ್ ಶಿಕ್ಷಕಿ ಶ್ರೀಮತಿ ಸ್ವರ್ಣಲತಾ ಹಾಗೂ ಹಿಮಾಲಯ ವುಡ್ ಬ್ಯಾಡ್ಜ್ ಹೋಲ್ಡರ್ ಸ್ಕೌಟ್ ಮಾಸ್ಟರ್ ಶ್ರೀಮಾನ್ ಗುಲ್ಶನ್ ರವರು ಭಾಗವಹಿಸಿದರು. ಮೂರ್ನಾಡಿನ ಗ್ರಾಮ ಪಂಚಾಯತ್ ರವರು ಈ ಕಾರ್ಯಕ್ರಮಕ್ಕೆ ಕೈಜೋಡಿಸಿದರು. ಸ್ವಚ್ಛ ಕೊಡಗು ಸುಂದರ ಕೊಡಗು ಕಾರ್ಯಕ್ರಮವು ಶಿಸ್ತು ಬದ್ಧವಾಗಿ ನೆರವೇರಿತು.