ಸ್ವಚ್ಛ ಕೊಡಗು-ಸುಂದರ ಕೊಡಗು: ಕೊಟ್ಟಮುಡಿಯಲ್ಲಿ ಸ್ವಚ್ಛತಾ ಅಭಿಯಾನ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಸ್ವಚ್ಛ ಕೊಡಗು ಸುಂದರ ಕೊಡಗು ವಿಶೇಷ ಪರಿಕಲ್ಪನೆಯೊಂದಿಗೆ ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಹಲವು ಸಂಘಟನೆಗಳೊಂದಿಗೆ ಹಮ್ಮಿಕೊಳ್ಳಲಾದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಡವರ ನೆರವು ಕೊಟ್ಟಮುಡಿ ಹಾಗೂ ಉಮ್ಮತ್ ಒನ್ ಕೊಡಗು ಸಂಘಟನೆಯು ಹೊದ್ದೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಸ್ವಚ್ಛತಾ ಶ್ರಮದಾನ ನಡೆಸಿದರು.
ನಾಪೋಕ್ಲು ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕೊಟ್ಟಮುಡಿ ಜಂಕ್ಷನ್ ನಿಂದ ಬೆಟ್ಟಗೇರಿ ಜಂಕ್ಷವರೆಗೆ ರಸ್ತೆಯ ಎರಡು ಬದಿಗಳಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.ಬಳಿಕ ಹೊದ್ದೂರು ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿ ಮಾಲೀಕರು, ಮನೆ ಮಾಲೀಕರು ತ್ಯಾಜ್ಯಗಳನ್ನು ಹಾಕದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಮುಂದಿನ ದಿನಗಳಲ್ಲಿ ತ್ಯಾಜ್ಯ ಹಾಕುವವರ ವಿರುದ್ಧ ಪಂಚಾಯತ್ ವತಿಯಿಂದ ದಂಡ ವಿಧಿಸುವ ಎಚ್ಚರಿಕೆ ನೀಡಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್. ಎ. ಹಂಸ,ಲೀ ಕೂರ್ಗ್ ಮಾಲೀಕರಾದ ಬಷೀರ್ ಅಲಿ, ಮೈಸಿ ಕತ್ತಣಿರ,ಹೊದವಾಡ ಆಝಾದ್ ನಗರ ಜಮಾಅತ್ ಅಧ್ಯಕ್ಷ ಪಿ.ಯು.ಅಹ್ಮದ್, ಪಂಚಾಯತ್ ಸದಸ್ಯರಾದ ಮೊಯ್ದು,ಅನಿತಾ,ಪ್ರಮುಖರಾದ ಖಾಸಿಂ,ರಿಯಾಜ್,ಬಷೀರ್ ಝಕರಿಯ ಸೇರಿದಂತೆ ಕೊಟ್ಟಮುಡಿ ಬಡವರ ನೆರವು ಹಾಗೂ ಉಮ್ಮತ್ ಒನ್ ಸಂಸ್ಥೆಯ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.