ಸ್ವಚ್ಛ ಕೊಡಗು-ಸುಂದರ ಕೊಡಗು:ನಾಲ್ಕೇರಿ ಗ್ರಾಮದ ವಿವಿಧೆಡೆ ಸ್ವಚ್ಛತಾ ಕಾರ್ಯ
ಪೊನ್ನಂಪೇಟೆ:ಇಂದು ಕೊಡಗಿನಾದ್ಯಂತ ನಡೆಯುತ್ತಿರುವ ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದಲ್ಲಿ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ವಿವಿಧ ಕಡೆಗಳಲ್ಲಿ, ಮತ್ತು ಗ್ರಾಮದ ನಡುವೆ ಹಾದುಹೋಗುವ ರಾಜ್ಯ ಹೆದ್ದಾರಿ ಉದ್ದಕ್ಕೂ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಅಭಿಯಾನಕ್ಕೆ ಗ್ರಾಮದ ಬಿ.ಕೆ.ಎನ್ ಸ್ಪೋರ್ಟ್ಸ್ ಕ್ಲಬಿನ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮದ ಹಲವು ಸಂಘ ಸಂಸ್ಥೆಯ ಸದಸ್ಯರು ಮತ್ತು ಗ್ರಾಮಸ್ಥರು ಸೇರಿ ಅಭಿಯಾನವನ್ನು ಯಶಸ್ವಿಗೊಳಿಸಿದರು.